ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರದಲ್ಲಿ ಇಂದು 7 ಸೋಂಕಿತರು ಪತ್ತೆ: ಓರ್ವ ಬಲಿ - ಕೋವಿಡ್​-19 ವರದಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಕ್ಯೆ ಹೆಚ್ಚಾಗುತ್ತಿದ್ದು, ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1 ವರ್ಷದ ಮಗು ಸೇರಿ ಒಟ್ಟು 7 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

seven-corona-cases-found-in-chikkaballapura
ಚಿಕ್ಕಬಳ್ಳಾಪುರ

By

Published : Jul 6, 2020, 7:29 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಒಂದು ವರ್ಷದ ಮಗು ಸೇರಿದಂತೆ 7 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಒಂದು ವರ್ಷದ ಮಗುವಿಗೆ ರೋಗಿ-15397 ಸಂಪರ್ಕದಿಂದ ಸೋಂಕು ತಗುಲಿದ್ದು, 51 ವರ್ಷದ ಮಹಿಳೆ, 51 ವರ್ಷದ ಪುರುಷ, 32 ವರ್ಷದ ಮಹಿಳೆಗೆ ಬೆಂಗಳೂರು ಪ್ರಯಾಣ ಹಿನ್ನೆಲೆ ಸೋಂಕು ಹರಡಿದೆ. 70 ವರ್ಷದ ಪುರುಷನಿಗೆ ರೋಗಿ-11995ರ ಸಂಪರ್ಕದಿಂದ ಸೋಂಕು ತಗುಲಿದೆ.

ಗೌರಿಬಿದನೂರಿನ 59 ವರ್ಷದ ಪುರುಷನಿಗೆ ರೋಗಿ-19829ರ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. ಗೌರಿಬಿದನೂರಿನ 60 ವರ್ಷದ ಪುರುಷನಿಗೆ ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಸಾಪನ್ನಪ್ಪಿದ್ದಾನೆ. ಸದ್ಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ಇಂದು 13 ಜನ ಕೊವೀಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, 60 ಸಕ್ರಿಯ ಸೋಂಕಿತರಿಗೆ ಜಿಲ್ಲೆಯ ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 9 ಜನ ಸಾವನ್ನಪ್ಪಿದ್ದಾರೆ.

ABOUT THE AUTHOR

...view details