ಚಿಕ್ಕಬಳ್ಳಾಪುರ:ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸದ್ಯ ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮತಯಾಚನೆ ಮಾಡಿದ್ದಾರೆ.
ಶಿಡ್ಲಘಟ್ಟ ನಗರಸಭೆ ಚುನಾವಣೆ: ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ - undefined
ಶಿಡ್ಲಘಟ್ಟ ನಗರಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಅಭ್ಯರ್ಥಿಗಳು ಹಗಲು-ರಾತ್ರಿ ಎನ್ನದೇ ಮತದಾರರ ಮನೆಗಳಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ.
ನಗರಸಭೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳಿಗೆ 115 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಇದರ ಸಲುವಾಗಿಯೇ ನಗರಸಭೆ ಚುನಾವಣೆಗೆ ಅಭ್ಯರ್ಥಿಗಳು ಇನ್ನಷ್ಟು ಮತ ಪ್ರಚಾರಕ್ಕೆ ಮುಂದಾಗಿದ್ದಾರೆ. ಚುನಾವಣೆಗೆ ಒಂದೇ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಹಗಲು-ರಾತ್ರಿ ಎನ್ನದೇ ಮತದಾರರ ಮನೆಗಳಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಮತಯಾಚನೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕೆ ಜನರನ್ನು ಕರೆತರಲು ಕೆಲವರು ಹರಸಾಹಸ ಪಡುತ್ತಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಪಕ್ಷೇತರ ಅಭ್ಯರ್ಥಿಗಳು ಜನರನ್ನು ಕರೆತರಲು ಹರಸಾಹಸ ಪಡುತ್ತಿದ್ದಾರೆ. ಅಭ್ಯರ್ಥಿಗಳು ಬಿಸಿಲು ಎನ್ನದೇ ಮತದಾರರ ಮನೆ ಬಾಗಿಲಿಗೆ ಹೋಗಿ ಮತಯಾಚನೆ ಮಾಡಿದ್ದಾರೆ.