ಚಿಕ್ಕಬಳ್ಳಾಪುರ:ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದ ಜೆಡಿಎಸ್ ಮುಖಂಡ ರವಿ ಎಂಬುವರ ಪುತ್ರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಲಹರಿ (21) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಲಹರಿ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ವಿದ್ಯಾಭ್ಯಾಸದಲ್ಲಿನ ಒತ್ತಡ ತಾಳಲಾರದೆ ಕಳೆದ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಪೋಷಕರು, ಯುವತಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಇಂದು ಆಕೆಯ ಅಂತ್ಯಸಾಂಸ್ಕರ ನೆರವೇರಿಸಲಾಯಿತು.
ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.