ಚಿಕ್ಕಬಳ್ಳಾಪುರ:ಕೊರೊನಾ ವೈರಸ್ ಕಾರಣ ಶಿಕ್ಷಕರ ದಿನಾಚರಣೆಯನ್ನು ಜಿಲ್ಲೆಯಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು.
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲು ಎಲ್ಲಾ ತಾಲೂಕುಗಳು ನಿರ್ಧರಿಸಿರುವ ಕಾರಣ, ಸರ್ವಪಲ್ಲಿ ರಾಧಕೃಷ್ಣನ್ ಭಾವಚಿತ್ರಕ್ಕೆ ಹೂಗಳನ್ನು ಸಮರ್ಪಿಸಿ ಆಚರಣೆ ಮಾಡಲಾಯಿತು.
ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದ್ದು, ತಿದ್ದಿ ತೀಡುವ ಅವಶ್ಯಕತೆ ಹೆಚ್ಚಾಗಿದೆ. ಅದೇ ರೀತಿ ಈ ವರ್ಷ ಜಿಲ್ಲೆಯೂ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಮೆಲುಕು ಹಾಕಿದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಥರ್ಮಲ್ ತಪಾಸಣೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಜಿಲ್ಲೆಯ ಚಿಕ್ಕಬಳ್ಳಾಪುರ, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ ತಾಲೂಕು ವ್ಯಾಪ್ತಿಯಲ್ಲಿಯೂ ಸರಳವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಿದರು.