ಕರ್ನಾಟಕ

karnataka

ETV Bharat / state

ಸರ್ಕಾರದ 1 ವರ್ಷದ ಸಾಧನೆಗಳ ವಿಡಿಯೋ ಸಂವಾದ: ವೈದ್ಯಕೀಯ ಶಿಕ್ಷಣ ಸಚಿವರು ಭಾಗಿ - dr k sudhakar

ರಾಜ್ಯ ಸರ್ಕಾರದ ಒಂದು ವರ್ಷದ ಯಶಸ್ವಿ ಸಮಾರಂಭವನ್ನು ಜಿಲ್ಲಾಪಂಚಾಯತ್ ಸಂಭಾಗಣದಲ್ಲಿ ಏರ್ಪಡಿಸಲಾಗಿತ್ತು. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ ಸುಧಾಕರ್, ಜಿಲ್ಲಾಧಿಕಾರಿ ಆರ್ ಲತಾ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

bsy
bsy

By

Published : Jul 27, 2020, 1:20 PM IST

ಚಿಕ್ಕಬಳ್ಳಾಪುರ:ರಾಜ್ಯ ಸರ್ಕಾರದ ಒಂದು ವರ್ಷದ ಯಶಸ್ವಿ ಸಮಾರಂಭವನ್ನು ಜಿಲ್ಲಾಪಂಚಾಯತ್ ಸಂಭಾಗಣದಲ್ಲಿ ಏರ್ಪಡಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ ಸುಧಾಕರ್ ನವತಂತ್ರಜ್ಞಾನ ವರ್ಚ್ಯುವಲ್ ಫ್ಲಾಟ್​ಫಾರ್ಮ್ ಮೂಲಕ ವೀಕ್ಷಣೆ ಮಾಡಿದ್ರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಆರ್ ಲತಾ, ಸಿಇಒ ಫೌಜಿಯಾ ತರನುಮ್, ಎಸ್​ಪಿ ಮಿಥುನ್ ಕಮಾರ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಭಾಗಿಯಾಗಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯಕ್ರಮ ವೀಕ್ಷಣೆ ಮಾಡಿದರು.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನೇಕಾರ ಬಿ.ಎನ್ ರವಿಕುಮಾರ್ ಮಾತಾನಾಡಿ, ರೇಷ್ಮೆ ಉತ್ಪನ್ನಗಳು ಲಾಕ್‌ಡೌನ್ ಹೊಡೆತಕ್ಕೆ ಸಿಲುಕಿ ಸಂಕಷ್ಟಕ್ಕೆ ಒಳಗಾಗಿದ್ದವು. ಆದರೆ, ಸರ್ಕಾರ ನೇಕಾರರ ಸಂಕಷ್ಟಕ್ಕೆ ಸ್ಪಂದಿಸಿ ಪ್ರೋತ್ಸಾಹ ಧನ ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದಗಳನ್ನ ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು 'ಸವಾಲುಗಳ ಒಂದು ವರ್ಷ- ಪರಿಹಾರದ ಸ್ಪರ್ಶ' ಪುಸ್ತಕವನ್ನು ಜಿಲ್ಲಾಉಸ್ತುವಾರಿ ಸಚಿವ ಡಾ ಕೆ ಸುಧಾಕರ್ ಬಿಡುಗಡೆ ಮಾಡಿದ್ರು.

For All Latest Updates

ABOUT THE AUTHOR

...view details