ಬಾಗೇಪಲ್ಲಿ(ಚಿಕ್ಕಬಳ್ಳಾಪುರ): ಭೂ ಸುಧಾರಣ ಕಾಯ್ದೆ, ಎಪಿಎಂಸಿ ಸೇರಿದಂತೆ ಹಲವಾರು ಕಾಯ್ದೆಗಳಿಗೆ ತಿದ್ದುಪಡಿ ತಂದು, ರೈತ ವಿರೋಧಿ ನೀತಿಗಳನ್ನು ಜಾರಿಗೆ ತರಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಿವೆ. ಈ ನೀತಿಯನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ, ಬಾಗೇಪಲ್ಲಿ ತಾಲೂಕು ಘಟಕದ ವತಿಯಿಂದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ.
ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ವಿಧಾನಸೌದಕ್ಕೆ ಮುತ್ತಿಗೆ ಹಾಕಲು ಸಜ್ಜು
ಕೃಷಿ ಮಸೂದೆಗಳನ್ನು ಜಾರಿಗೆ ತಂದಿರುವುದನ್ನು ವಿರೋಧಿಸಿ, ಇವುಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಬಾಗೇಪಲ್ಲಿ ತಾಲೂಕು ಘಟಕದ ವತಿಯಿಂದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದೆ.
ಹಸಿರು ಸೇನೆ ವತಿಯಿಂದ ವಿಧಾನಸೌದಕ್ಕೆ ಮುತ್ತಿಗೆ ಹಾಕಲು ಸಜ್ಜು
ಬಾಗೇಪಲ್ಲಿ ತಾಲೂಕು ರಾಜ್ಯ ಹಸಿರು ಸೇನೆ ಸಂಚಾಲಕ ಲಕ್ಷ್ಮಣ ರೆಡ್ಡಿ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಅಧಿವೇಶನಕ್ಕೂ ಮುನ್ನಾ ರೈತರು ಹಾಗೂ ರೈತ ಮುಖಂಡರು ಎಚ್ಚರಿಕೆ ನೀಡಿದ್ದರು. ಕೃಷಿವಲಯವನ್ನು ಖಾಸಗೀಕರಣಗೊಳಿಸಿ, ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಕಾರ್ಪೋರೇಟ್ ಕಂಪನಿಗಳಿಗೆ ರತ್ನಗಂಬಳಿಯನ್ನು ಹಾಕುತ್ತಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ನಾನು ರೈತನ ಮಗ ನಮ್ಮದು ರೈತಪರ ಸರ್ಕಾರ ಎಂದಿದ್ದರು. ರೈತನ ಮಗನಾಗಿ ನೀವು ಹೀಗೆ ಮಾಡುವುದಾ ಎಂದು ಪ್ರಶ್ನಿಸಿದ್ದಾರೆ.
Last Updated : Sep 21, 2020, 5:16 PM IST