ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿರುದ್ದ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆ ವಿರುದ್ಧ ನ್ಯಾಯಾಲಯ ಇಂದು ತೀರ್ಪು ನೀಡಿದ್ದು 25 ಸಾವಿರ ಬಾಂಡ್ ಠೇವಣಿ ಕಟ್ಟಿಸಿಕೊಂಡು ಜಾಮೀನು ಮಂಜೂರು ಮಾಡಿದೆ.
ಆಂಜನೇಯ ರೆಡ್ಡಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಸುಧಾಕರ್ ವಿರುದ್ದ ಹೂಡಿದ್ದ ಮಾನನಷ್ಟ ಮೊಕದ್ದಮೆ ಅಂಗೀಕರಿಸಿದ್ದ ವಿಶೇಷ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಹಾಕಿದ್ದ ಸಚಿವರು ಕೋರ್ಟ್ಗೆ ಖುದ್ದು ಹಾಜರಾಗಿದ್ದರು. ಇದೀಗ ನ್ಯಾಯಾಲಯವು ವೈಯುಕ್ತಿಕ ಬಾಂಡ್ ಮತ್ತು 25,000 ಠೇವಣಿ ಕಟ್ಟಿಸಿಕೊಂಡು ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಗೆ ಡಿ.09 ರಂದು ದಿನಾಂಕ ನಿಗದಿಪಡಿಸಿದೆ.