ಚಿಕ್ಕಬಳ್ಳಾಪುರ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಂತಾಮಣಿ ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ ಇಂದು ಗುದ್ದಲಿ ಪೂಜೆ ನೆರವೇರಿಸಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ - Stone Laid program by MLAs for various development
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಇಂದು ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಕಾರ್ಯಕ್ರಮ ನಡೆದಿದ್ದು, ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಈ ಗುದ್ದಲಿ ಪೂಜೆ ಕಾರ್ಯ ನೆರವೇರಿಸಿದರು.
ತಾಲೂಕಿನ ಆನೂರು ಗ್ರಾಮದಲ್ಲಿ ಮುಖ್ಯಮಂತ್ರಿ ಮಾದರಿ ಗ್ರಾಮ ವಿಕಾಸ ಯೋಜನೆಯಡಿ 50 ಲಕ್ಷ ರೂಪಾಯಿಗಳ ವಿವಿಧ ಮೂಲಭೂತ ಕಾಮಗಾರಿಗಳು, ಮುತ್ತುಕದಹಳ್ಳಿ ಗ್ರಾಮದಲ್ಲಿ 3 ಲಕ್ಷ ವೆಚ್ಚದಲ್ಲಿ ದುರಸ್ತಿಗೊಂಡಿರುವ ಚಾವಡಿ ಕಟ್ಟಡ ಹಾಗೂ ಮಹಿಳಾ ಸ್ತ್ರೀಶಕ್ತಿ ಸಂಘದವರಿಗೆ ಕಟ್ಟಡದ ಹಸ್ತಾಂತರ, 2017-18 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ತಳವಾರ ಗ್ರಾಮ ಪಂಚಾಯಿತಿಯ ಅಟ್ಟೂರು ಗ್ರಾಮದಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನದ ನಿರ್ಮಾಣ ಕಾರ್ಯಗಳಿಗೆ ಶಾಸಕರು ಗುದ್ದಲಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.
ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ 2019-20 ನೇ ಸಾಲಿನ ಅಲೆಮಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಂಗಮಶೀಗೆಹಳ್ಳಿ ಗ್ರಾಮದಲ್ಲಿ ಅಂದಾಜು 5 ಲಕ್ಷಗಳಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಎಂ.ಗೊಲ್ಲಹಳ್ಳಿ ಪಂಚಾಯಿತಿಯ ಮುಂಗಾನಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂಪಾಯಿಗಳ ವಿವಿಧ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಹಾಗೂ 2019-20 ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದ ಐಆರ್ಡಿಎಫ್-25 ರ ಯೋಜನೆಯಲ್ಲಿ ಚಿಂತಾಮಣಿ ನಗರದ ವೆಂಕಟಗಿರಿ ಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯ 9 ಲಕ್ಷ ರೂಪಾಯಿ ವೆಚ್ಚದ ಕೊಠಡಿ ನಿರ್ಮಾಣ ಕಾಮಗಾರಿಗಳಿಗೂ ಸಹ ಶಾಸಕರು ಗುದ್ದಲಿ ಪೂಜೆ ಮಾಡಿದರು.