ಚಿಕ್ಕಬಳ್ಳಾಪುರ:ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾಮಣಿ ತಾಲೂಕಿನ ಎನೆಗದಲೇ ಗ್ರಾಮದಲ್ಲಿ ನಡೆದಿದೆ.
ದ್ವಿತೀಯ ಪಿಯು ಫಲಿತಾಂಶದಲ್ಲಿ ಅನುತ್ತೀರ್ಣ: ಚಿಂತಾಮಣಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು - ಫೇಲಾಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಇಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಅನುತ್ತೀರ್ಣಗೊಂಡ ಚಿಕ್ಕಬಳ್ಳಾಪುರದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿದ್ಯಾರ್ಥಿನಿ ಆತ್ಮಹತ್ಯೆ
ಹೊಸಕೋಟೆಯ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಶ್ವೇತ, ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೆಂಚಾರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಂಜನ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.