ಚಿಕ್ಕಬಳ್ಳಾಪುರ:ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪಾರಪೇಟೆ ಸಮೀಪ ವಿದ್ಯಾರ್ಥಿಯೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿಂತಾಮಣಿಯಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ - chikkaballapura news
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪಾರಪೇಟೆ ಸಮೀಪ ವಿದ್ಯಾರ್ಥಿಯೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಹೋಬಳಿಯ ಕೊಂಡಮಾವರಪಲ್ಲಿ ಗ್ರಾಮದ ಚಿನ್ನಪ್ಪರೆಡ್ಡಿ ಎಂಬುವರ ಪುತ್ರ ಕೆ.ಸಿ.ಮೋಹನ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆ ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇಂದು ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ಹೊರಟ್ಟಿದ್ದ ರೈಲಿಗೆ ವಿದ್ಯಾರ್ಥಿ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದು,ಈತನ ಆಧಾರ್ ಕಾರ್ಡ್ ಪತ್ತೆಯಾಗಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಗದೀಶ್ ರೆಡ್ಡಿ ಮತ್ತು ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.