ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರು ರೇಷ್ಮೆ ಕೃಷಿ ವಿದ್ಯಾಲಯದಲ್ಲಿ ನಡೆದಿದೆ. ಕೃಷಿ ವಿಭಾಗದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತಿದ್ದ ಪವಿತ್ರಾ ಎಸ್ (20) ಮೃತ ವಿದ್ಯಾರ್ಥಿನಿ.
ಈಕೆ ವಿಶ್ವ ವಿದ್ಯಾಲಯದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ತನ್ನ ಸ್ನೇಹಿತನೊಂದಿಗೆ ವಿಡಿಯೋ ಕಾಲ್ ಮಾಡಿ ತನ್ನ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಬಳಿಕ ಹಾಸ್ಟೆಲ್‌ನ ಸ್ನೇಹಿತೆಯರು ಹಾಗೂ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.