ಕರ್ನಾಟಕ

karnataka

ETV Bharat / state

ಚಪ್ಪಲಿ ಅಂಗಡಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ.ನಷ್ಟ - ಚಪ್ಪಲಿ ಅಂಗಡಿಯಲ್ಲಿ ಅಕಸ್ಮಿಕ ಬೆಂಕಿ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಚಪ್ಪಲಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಅಂಗಡಿಯಲ್ಲಿದ್ದ ಚಪ್ಪಲಿಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಚಪ್ಪಲಿ ಅಂಗಡಿಗೆ ಆಕಸ್ಮಿಕ ಬೆಂಕಿ

By

Published : Nov 25, 2019, 7:31 AM IST

Updated : Nov 25, 2019, 9:30 AM IST

ಚಿಕ್ಕಬಳ್ಳಾಪುರ: ಚಪ್ಪಲಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

ನಗರದ ಬೆಂಗಳೂರು ರಸ್ತೆಯ ಯೋಗಿ ನಾರಾಯಣ ವೃತ್ತದಲ್ಲಿರುವ ಮಾಲೀಕ ಶಫೀ ಅವರ ಚಪ್ಪಲಿ ಅಂಗಡಿಗೆ ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಬಿದ್ದಿದೆ.

ಚಪ್ಪಲಿ ಅಂಗಡಿಗೆ ಆಕಸ್ಮಿಕ ಬೆಂಕಿ

ಅಂಗಡಿಗೆ ಬೆಂಕಿ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಪ್ಪಲಿಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

Last Updated : Nov 25, 2019, 9:30 AM IST

ABOUT THE AUTHOR

...view details