ಗುಡಿಬಂಡೆ/ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ಬಗ್ಗೆ ತಪ್ಪು ಸಂದೇಶಗಳನ್ನು ಹಬ್ಬಿಸುವ ಬದಲು ಅದನ್ನು ತಡೆಗಟ್ಟುವ ವಿಧಾನಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ತಹಶೀಲ್ದಾರ್ ಹನುಮಂತರಾಯಪ್ಪ ಸಲಹೆ ನೀಡಿದರು.
ಕೊರೊನಾ ವೈರಸ್ ಬಗ್ಗೆ ತಪ್ಪು ಸಂದೇಶ ನೀಡದಿರಿ: ತಹಶೀಲ್ದಾರ್ ಸಲಹೆ
ಕೊರೊನಾ ವೈರಸ್ ಬಗ್ಗೆ ತಪ್ಪು ಸಂದೇಶಗಳನ್ನು ತಿಳಿಸುವ ಬದಲು ಅದನ್ನು ತಡೆಗಟ್ಟುವ ವಿಧಾನಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ತಹಶೀಲ್ದಾರ್ ಹನುಮಂತರಾಯಪ್ಪ ಸಲಹೆ ನೀಡಿದರು.
ಕಳೆದ ಭಾನುವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಪಟ್ಟಣದ ನಿವಾಸಿಯೊಬ್ಬರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿದೆ ಎಂದು ಸಾರ್ವಜನಿಕ ವಲಯದಲ್ಲಿ ಪ್ರಚಾರವಾಗಿದೆ. ಆದರೆ, ಆ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿಲ್ಲ. ಬದಲಿಗೆ ಆ ಹುಡುಗನಿಗೆ ಸಾಮಾನ್ಯ ಜ್ವರ ಕಾಣಿಸಿಕೊಂಡಿದೆ ಅಷ್ಟೇ. ಆದ್ದರಿಂದ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೇ ನಿರ್ಭಯವಾಗಿರಬಹುದು. ಮುಖ್ಯವಾಗಿ ಸಾರ್ವಜನಿಕ ವಲಯದಲ್ಲಿ ಸುಳ್ಳು ಸಂದೇಶಗಳನ್ನು ಹರಡುವ ಬದಲು ಕೊರೊನಾ ವೈರಸ್ ಬಾರದಂತೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿ. ಆಗ ಜನ ನಿರ್ಭಯದಿಂದ ಬದುಕಬಹುದು ಎಂದರು.
ಇನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ತಡೆಯಲು ಆಡಳಿತ ಮಂಡಳಿ ಸದಾ ಕ್ರಿಯಾಶೀಲವಾಗಿದೆ ಎಂದರು.