ಕರ್ನಾಟಕ

karnataka

ETV Bharat / state

ಹಾಸ್ಟೆಲ್​ಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್; ಅವ್ಯವಸ್ಥೆ ಹಿನ್ನೆಲೆಯಲ್ಲಿ ಪಾಲಕಿಗೆ ಕ್ಲಾಸ್

ಬೆಳ್ಳಂಬೆಳಗ್ಗೆ ತಹಶೀಲ್ದಾರ್‌ ವಿಶ್ವನಾಥ್ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By

Published : Sep 14, 2019, 8:25 PM IST

ಹಾಸ್ಟೆಲ್​ಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

ಚಿಕ್ಕಬಳ್ಳಾಪುರ:ಚಿಂತಾಮಣಿ ನಗರದ ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ತಾಲೂಕು ದಂಡಾಧಿಕಾರಿಗಳು ದಿಢೀರ್ ಭೇಟಿ ನೀಡಿ ನಿಲಯದ ಅವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಹಾಸ್ಟೆಲ್​ಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

ಬೆಳ್ಳಂಬೆಳಗ್ಗೆ ತಹಶೀಲ್ದಾರ್‌ ವಿಶ್ವನಾಥ್ ಹಾಸ್ಟೆಲ್​ನಲ್ಲಿನ ಸ್ವಚ್ಛತೆ, ನಿಲಯ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳು ಸೇರಿದಂತೆ ಇನ್ನಿತರ ಅವಶ್ಯಕತೆಗಳ ಬಗ್ಗೆ ಪರಿಶೀಲನೆ ಮಾಡಿದ್ದು, ನಿರ್ವಹಣೆಯನ್ನು ಕಂಡು ಬೆರಗಾಗಿದ್ದಾರೆ.

ಬಡ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡಿ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ನಿಲಯದಲ್ಲಿ ನಿಲಯ ಪಾಲಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಇಲ್ಲದರಿರುವುದು ಖೇದಕರ ಸಂಗತಿಯಾಗಿದೆ ಎಂದರು.

ವಿದ್ಯಾರ್ಥಿನಿಯರ ನಿಲಯದಲ್ಲಿ ಎಷ್ಟು ಮಕ್ಕಳಿದ್ದಾರೆ, ನಿಲಯಕ್ಕೆ ನೀಡಿರುವ ಸೌಲಭ್ಯಗಳ ಬಗ್ಗೆ ಸಕ್ರಿಯವಾದ ದಾಖಲೆಗಳ ನಿರ್ವಹಣೆ ನಿರ್ವಹಣೆ ಮಾಡಿಲ್ಲ. ಮಕ್ಕಳ ಸಂಖ್ಯೆ ಕಡಿಮೆ ಇದ್ದರೂ ಹಾಜರಾತಿ ಪುಸ್ತಕದಲ್ಲಿ ಮಾತ್ರ 186 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಸಂಖ್ಯೆ ತೋರಿಸುವ ಮೂಲಕ ಸರ್ಕರಕ್ಕೆ ತಪ್ಪು ಲೆಕ್ಕಗಳನ್ನು ನೀಡುತ್ತಿರುವ ಬಗ್ಗೆ ಬೇಸರಗೊಡ ತಹಶೀಲ್ದಾರ್‌ ನಿಲಯ ಪಾಲಕಿ ಶೈಲಜಾ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

2019 ನೇ ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇದುವರೆಗೆ ಭೇಟಿ ನೀಡಿಲ್ಲ. ಪುಸ್ತಕದಲ್ಲಿ ಸಮಾಜ ಕಲ್ಯಾಣ ಇಲಾಖೆಯವರು ಭೇಟಿ ನೀಡಿರುವ ಬರಹಗಳು ಇಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್ ವಿಶ್ವನಾಥ್ ಪತ್ರ ಬರೆದಿದ್ದಾರೆ.

ABOUT THE AUTHOR

...view details