ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಶಿಕ್ಷಕ ದಂಪತಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಬಳಿ ನಡೆಯಿತು. ದಯಾನಂದಬಾಬು(49) ಹಾಗೂ ಎಸ್.ರಾಜೇಶ್ವರಿ(45) ಮೃತರು.
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಬೊಲೆರೋ ಡಿಕ್ಕಿ, ಶಿಕ್ಷಕ ದಂಪತಿ ಸಾವು - ಚಿಂತಾಮಣಿ ತಾಲೂಕಿನ ದೊಡ್ಡಗಂಜೂರ
ಚಿಂತಾಮಣಿ ಬಳಿ ದ್ವಿಚಕ್ರ ವಾಹನಕ್ಕೆ ಬೊಲೆರೋ ಡಿಕ್ಕಿಯಾಗಿ ಅನಾಹುತ ಸಂಭವಿಸಿತು.
ದಯಾನಂದಬಾಬು ಶ್ರೀನಿವಾಸಪುರ ತಾಲೂಕಿನ ಅರಕೇರಿ ಗ್ರಾಮದಲ್ಲಿ ಶಿಕ್ಷಕರಾಗಿದ್ದರು. ಪತ್ನಿ ರಾಜೇಶ್ವರಿ ಇದೇ ತಾಲೂಕಿನ ಮ್ಯಾಕಲಘಟ್ಟ ಗ್ರಾಮದಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಯಲ್ದೂರು ಗ್ರಾಮದವರಾಗಿದ್ದು, ಚಿಂತಾಮಣಿಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ನಗರದಿಂದ ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ಹೋಗಿ ಬರುತ್ತಿದ್ದರು.
ಶ್ರೀನಿವಾಸಪುರದಿಂದ ಚಿಂತಾಮಣಿಗೆ ಬರುತ್ತಿದ್ದ ಸಂದರ್ಭದಲ್ಲಿ ಚಿಂತಾಮಣಿಯಿಂದ ಶ್ರೀನಿವಾಸಪುರದ ಕಡೆಗೆ ಹೋಗುತ್ತಿದ್ದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಘಟನೆಗೆ ಬೊಲೆರೋ ವಾಹನ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.