ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಗುಡಿಸಲಿಗೆ ಬೆಂಕಿಯಿಟ್ಟ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಡ್ಲವಾರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ: ಗುಡಿಸಲುಗಳು ಬೆಂಕಿಗಾಹುತಿ
ಶಿಡ್ಲಘಟ್ಟ ತಾಲೂಕಿನ ಸಡ್ಲವಾರಹಳ್ಳಿ ಗ್ರಾಮದಲ್ಲಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಗುಡಿಸಲುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಮಾನವೀಯವಾಗಿ ವರ್ತಿಸಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ಸಡ್ಲವಾರಹಳ್ಳಿ ಗ್ರಾಮದಲ್ಲಿ ಗುಡಿಸಲುಗಳು ಬೆಂಕಿಗಾಹುತಿ
ಇತ್ತೀಚೆಗಷ್ಟೇ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶದ ನಂತರ ಗ್ರಾಮದ ನಾಗ ಭೂಷಣಪ್ಪ, ನವೀನ್, ನರಸಿಂಹಮೂರ್ತಿ, ರಮೇಶ್, ಅಶೋಕ್ ಎಂಬುವರ ನಡುವೆ ದ್ವೇಷ ಹುಟ್ಟಿಕೊಂಡಿತ್ತು. ಇಂದು ಮಾತಿಗೆ ಮಾತು ಬೆಳೆದು ಎರಡು ಗುಂಪಿನವರು ದೊಣ್ಣೆ, ರಾಡ್ಗಳಿಂದ ಬಡಿದಾಡಿಕೊಂಡು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಲಾಟೆ ವೇಳೆ ಗುಡಿಸಲುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಮಾನವೀಯವಾಗಿ ವರ್ತಿಸಿದ್ದಾರೆ.
ಇನ್ನು ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಈ ಸಂಬಂಧ ದಿಬ್ಬುರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.