ಚಿಕ್ಕಬಳ್ಳಾಪುರ:ಕೊರೊನಾ ಕರ್ತವ್ಯದಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಜನ್ ಹೃದಯಾಘಾತಕ್ಕೆ ಒಳಗಾಗಿ ಇಂದು ಬೆಂಗಳೂರಿನ ಎಸ್ಟಾರ್ ಸಿಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೋವಿಡ್-19 ಕರ್ತವ್ಯದಲ್ಲಿದ್ದ ಚಿಕ್ಕಬಳ್ಳಾಪುರ ವೈದ್ಯ ಸಾವು - ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಚಿಕ್ಕಬಳ್ಳಾಪುರ ವೈದ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
![ಕೋವಿಡ್-19 ಕರ್ತವ್ಯದಲ್ಲಿದ್ದ ಚಿಕ್ಕಬಳ್ಳಾಪುರ ವೈದ್ಯ ಸಾವು ಜಿಲ್ಲಾಸ್ಪತ್ರೆ](https://etvbharatimages.akamaized.net/etvbharat/prod-images/768-512-6817527-463-6817527-1587039420212.jpg)
ಜಿಲ್ಲಾಸ್ಪತ್ರೆ
ಡಾ.ಅನಿಲ್ ಕುಮಾರ್ (51) ಮೃತ. ಏಪ್ರಿಲ್ 8ರಂದು ಹೃದಯಘಾತಕ್ಕೆ ಒಳಗಾದ ಪರಿಣಾಮ ಬೆಂಗಳೂರಿನ ಎಸ್ಟಾರ್ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ.
ಅನಿಲ್ ಕುಮಾರ್ ಅವರು ಕೊರನಾ ಸೊಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಮೆಚ್ಚುಗೆ ಪಡೆದುಕೊಂಡಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
TAGGED:
ಚಿಕ್ಕಬಳ್ಳಾಪುರ ವೈದ್ಯ ಸಾವು