ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದ ನಿವಾಸಿಯೊಬ್ಬರು ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದಾರೆ. ಪರಿಣಾಮ ಅವರ ಮನೆಯ ಕಾಂಪೌಂಡ್ ಗೋಡೆಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ಡೌನ್ ಇದ್ದ ಕಾರಣ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೆ ಸರ್ಕಾರ ತನ್ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಲು ಇಂದಿನಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.