ಚಿಕ್ಕಬಳ್ಳಾಪುರ:ಸರ್ಕಾರಿ ಅಧಿಕಾರಿಗಳು ತಾವು ಮಾಡಬೇಕಾಗಿದ್ದ ಕೆಲಸವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಒಪ್ಪಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಕಚೇರಿ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆಯ ಕೆಲಸವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಒಪ್ಪಿಸಿದ್ದಾರೆ.
ಕಾಲೇಜಿಗೆ ಚಕ್ಕರ್, ತಾಲೂಕು ಕಚೇರಿಗೆ ಹಾಜರ್ : ಸರ್ಕಾರಿ ಕೆಲಸಕ್ಕೆ ವಿದ್ಯಾರ್ಥಿಗಳ ಬಳಕೆ - The use of students for government work
ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಆನ್ಲೈನ್ನಲ್ಲಿ ತಿದ್ದುಪಡಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಹಣ ಕೊಡುತ್ತಿದ್ದಾರೆ. ಹಣದ ಆಸೆಯಿಂದಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಚಕ್ಕರ್ ಹೊಡೆದು, ತಾಲೂಕು ಕಚೇರಿಗೆ ಹಾಜರಾಗುತ್ತಿದ್ದಾರೆ.
ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಆನ್ಲೈನ್ನಲ್ಲಿ ತಿದ್ದುಪಡಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಹಣ ಕೊಡುತ್ತಿದ್ದಾರೆ. ಹಣದ ಆಸೆಯಿಂದಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಚಕ್ಕರ್ ಹೊಡೆದು, ತಾಲೂಕು ಕಚೇರಿಗೆ ಹಾಜರಾಗುತ್ತಿದ್ದಾರೆ. ಇದೇ ತಿಂಗಳ 15 ರ ಒಳಗೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದು ಇರುವುದರಿಂದ ಅಧಿಕಾರಿಗಳು ಈ ಕೆಲಸ ಮಾಡಿಸುತಿದ್ದಾರೆ.
ಗುಡಿಬಂಡೆಯಂತಹ ಹಿಂದುಳಿದ ತಾಲೂಕಿನಲ್ಲಿ ಮಕ್ಕಳನ್ನು ಓದಲು ಕಳಿಸುವುದೇ ಹೆಚ್ಚು. ಹೀಗಿರುವಾಗ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಬಳಸಿಕೊಳ್ಳುತ್ತಿರುವುದು ನಿಜಕ್ಕೂ ದುರಂತ. ಹೆತ್ತವರು ಅದೆಷ್ಟೋ ಕನಸುಗಳನ್ನು ಕಟ್ಟಿಕೊಂಡು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳಿಸುತ್ತಾರೆ. ಆದರೆ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳನ್ನು ರಜೆ ಹಾಕಿಸಿ, ತಮ್ಮ ಕೆಲಸಗಳಿಗೆ ಬಳಸಿಕೊಳ್ಳುತ್ತಿರುವುದು ಎಷ್ಟು ಸರಿಯೆಂಬುದೇ ಪ್ರಶ್ನೆಯಾಗಿದೆ.