ಚಿಂತಾಮಣಿ(ಚಿಕ್ಕಬಳ್ಳಾಪುರ): ತಲೆಗೆ ಪೆಟ್ಟಾಗಿ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ಬಂದು ಗಂಟೆಗಟ್ಟಕೇ ಕಾದು ಕುಳಿತರೂ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಇಲ್ಲಿನ ಸಾರ್ವಜನಿಕ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.
ಚಿಕಿತ್ಸೆಗಾಗಿ ಗಂಟೆಗಟ್ಟಲೇ ಕಾದ ರೋಗಿ: ಕ್ಯಾರೇ ಎನ್ನದ ಸಿಬ್ಬಂದಿ - Chikkaballapura latest news '
ಗಾಯಗೊಂಡ ವ್ಯಕ್ತಿವೋರ್ವ ಚಿಕಿತ್ಸೆಗೆಂದು ಬಂದು ಗಂಟೆಗಟ್ಟಲೇ ಕಾದು ಕುಳಿತರೂ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಮಾಡಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.
ಆಸ್ಪತ್ರೆಯ ಮುಂದೆ ಕಾಯುತ್ತಿರುವ ರೋಗಿ
ನಗರ ಜೆಜೆ ಕಾಲೋನಿ ನಿವಾಸಿ ವೆಂಕಟೇಶಪ್ಪ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಸುಮಾರು ಒಂದು ಗಂಟೆಗೂ ಅಧಿಕ ಸಮಯ ಚಿಕಿತ್ಸೆಗಾಗಿ ಪರದಾಟ ನಡೆಸಿದರೂ ಸಹ ಆಸ್ಪತ್ರೆ ಸಿಬ್ಬಂದಿ ಮಾತ್ರ ಸ್ಪಂದಿಸಿಲ್ಲವಂತೆ.
ಈ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ಬೆಳಗಿನ ಪಾಳಿಯಲ್ಲಿ ಕೆಲಸ ಮಾಡುವ ನೌಕರರು ಗಂಟೆ 8 ಆದರೂ ಬರುವುದಿಲ್ಲ ಎಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.