ಚಿಕ್ಕಬಳ್ಳಾಪುರ: ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಇಳಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು, 'ನಿರುದ್ಯೋಗ ಸಮಸ್ಯೆ ಎಂಬುವುದು ಕಾಂಗ್ರೆಸ್ ಆಡಳಿತದಲ್ಲಿಯೂ ಇತ್ತು' ಎಂದು ಹೇಳಿದ್ದಾರೆ.
ಜಿಲ್ಲೆಯ ಗೌರಿಬಿದನೂರು, ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ ಸೇರಿದಂತೆ ಇತರೆ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಯ ಪರಮತ ಯಾಚನೆ ನಡೆಸಿದರು.
ಪ್ರಚಾರದ ವೇಳೆ ಮಾತನಾಡಿದ ಡಾ. ಸುಧಾಕರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾವಿರಾರು ಎಕರೆಗಳಲ್ಲಿ ಹಲವು ಕಂಪನಿಗಳು, ಕೈಗಾರಿಕೆಗಳು ಶುರುವಾಗಲಿದ್ದು, ಸಾಕಷ್ಟು ಉದ್ಯೋಗಗಳು ಸೃಷ್ಟಿಯಾಗಲಿವೆ. ಅದೇ ರೀತಿ ರಾಜ್ಯ ಸೇರಿದಂತೆ ದೇಶಾದ್ಯಂತ ಲಕ್ಷಾಂತರ ಉದ್ಯೋಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ನವರು ನಿರುದ್ಯೋಗ ವಿಷಯ ಹಿಡಿದುಕೊಂಡು ಮತಯಾಚನೆ ನಡೆಸುತ್ತಿದ್ದಾರೆ. ನಿರುದ್ಯೋಗ ಎಂಬುವುದು ಕಾಂಗ್ರೆಸ್ ಆಡಳಿದಿಂದಲೂ ಇದೆ. ಮುಂದಿನ ಮೂರು ವರ್ಷದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎತ್ತಿನಹೊಳೆ ನೀರು ಹರಿಯಲಿದೆ. ಬಿಜೆಪಿ ಸರ್ಕಾರ ಏನಾದರೂ ಮಾತು ಕೊಟ್ಟರೆ ಅದನ್ನು ಮಾಡಿ ತೋರಿಸುತ್ತೆ. ಬುರುಡೆ ಹೋಡೆಯುವುದಿಲ್ಲಾ ಎಂದು ಭರವಸೆ ನೀಡಿದರು.
ವಿಧಾನಪರಿಷತ್ ಸದಸ್ಯ ವೈಎ ನಾರಾಯಸ್ವಾಮಿ, ಬಿಜೆಪಿ ಮುಖಂಡ ಅರುಣ್ ಬಾಬು, ಜಿಲ್ಲೆ ಬಿಜೆಪಿ ಅಧ್ಯಕ್ಷರು, ಮುಖಂಡರು ಭಾಗಿಯಾಗಿದ್ದರು.