ಕರ್ನಾಟಕ

karnataka

ETV Bharat / state

ನೋಡ ನೋಡುತ್ತಿದ್ದಂತೆ ಚಿನ್ನದ ಸರ ಎಗರಿಸಿದ ಕಳ್ಳ: ದೃಶ್ಯ ಸಿಸಿಟಿವಿಯಲ್ಲಿ ಸೆರೆ - ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಳ್ಳನೋರ್ವ ತನ್ನ ಕೈಚಳಕ ತೋರಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ಬಾಗೇಪಲ್ಲಿ ಪಟ್ಟಣದ ಆಭರಣ ಅಂಗಡಿಯಲ್ಲಿ ನಡೆದಿದೆ.

Thief who stole gold and escape
ನೋಡ ನೋಡುತ್ತಿದ್ದಂತೆ ಚಿನ್ನದ ಸರ ಎಗರಿಸಿದ ಕಳ್ಳ

By

Published : Aug 22, 2021, 2:17 PM IST

ಚಿಕ್ಕಬಳ್ಳಾಪುರ(ಬಾಗೇಪಲ್ಲಿ): ತಾಲೂಕಿನಾದ್ಯಂತ ಕಳ್ಳರ ಹಾವಳಿ ಜೋರಾಗಿದೆ. ಆಭರಣ ಅಂಗಡಿಯೊಂದಕ್ಕೆ ನುಗ್ಗಿದ್ದ ಖತರ್ನಾಕ್‌ ಕಳ್ಳ ನೋಡ ನೋಡುತ್ತಿದ್ದಂತೆ ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆಬಾಗೇಪಲ್ಲಿಯಲ್ಲಿ ಶನಿವಾರ ನಡೆದಿದೆ.

ಬಾಗೇಪಲ್ಲಿ ಪಟ್ಟಣದ ಆಭರಣ ಅಂಗಡಿಗೆ ಬಂಗಾರ ಖರೀದಿಸಲು ಮಹಿಳೆಯರು ಜಮಾಯಿಸಿದ್ದರು. ಈ ವೇಳೆ ಕಳ್ಳ ತನ್ನ ಕೈಚಳಕ ತೋರಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಎಗರಿಸಿ ಎಸ್ಕೇಪ್​ ಆಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆ​ಯಾಗಿದೆ.

ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಕದ್ದ ಕಳ್ಳ

ಈ ಕುರಿತು ಬಾಗೇಪಲ್ಲಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details