ಚಿಕ್ಕಬಳ್ಳಾಪುರ: ಈ ವರ್ಷ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಖಂಡಿತ ಮಾಡ್ತೀವಿ. ಆದರೆ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಪಬ್ಲಿಕ್ ಪರೀಕ್ಷೆ ಬಗ್ಗೆ ಪೋಷಕರು ಹಾಗೂ ಶಿಕ್ಷಕರ ಅಪೇಕ್ಷೆ ಇತ್ತು. ಪಬ್ಲಿಕ್ ಪರೀಕ್ಷೆ ತೆಗೆದ ನಂತರ ಹತ್ತನೇ ತರಗತಿ ತನಕ ಪಾಸ್ ಆಗೇ ಆಗ್ತೀವಿ ಎಂಬ ಮನೋಭಾವದಿಂದ ಪರೀಕ್ಷೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿದೆ ಎಂದರು.
ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ
ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ. ಈ ಬಗ್ಗೆ ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ನವರಿಗೆ ಪರಮೇಶ್ವರ್ ಹೇಳಿಕೆಯೇ ಉತ್ತರಎಂದು ಅವರು ಪ್ರತಿಕ್ರಿಯಿಸಿದರು.
ಸ್ಪೀಕರ್ ಕುರಿತು ಸಿದ್ದರಾಮಯ್ಯ ಹೇಳಿಕೆ ವಿಚಾರ
ಸ್ಪೀಕರ್ ಆರ್ ಎಸ್ ಎಸ್ ಹೇಳಿದ ಹಾಗೆ ಕೆಲಸ ಮಾಡುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು, ಸಿದ್ದರಾಮಯ್ಯನವರು ಹಾಗೆ ಹೇಳ್ತಾರೆ, ಅವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದರು.
ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಎಸ್ಜೆಸಿಐಟಿ ಕಾಲೇಜಿನ ಕಾರ್ಯಕ್ರಮದಲ್ಲಿ ಸುರೇಶ್ ಕುಮಾರ್ ಭಾಗವಹಿಸಿದ್ದರು.