ಕರ್ನಾಟಕ

karnataka

By

Published : May 15, 2021, 7:59 AM IST

ETV Bharat / state

ಚಿಕ್ಕಬಳ್ಳಾಪುರದಲ್ಲಿ ರೈತ ಸಂಪರ್ಕ ಕೇಂದ್ರಗಳ ಸಮಯ ಬದಲಾವಣೆ

ಲಾಕ್​ಡೌನ್​ ಹಿನ್ನೆಲೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈ ಅವಧಿಯಲ್ಲಿ ರೈತರು ಬಿತ್ತನೆ, ಬೀಜ ಕೃಷಿ ಪರಿಕರ ಸೇರಿದಂತೆ ಇಲಾಖೆ ಸೌಲಭ್ಯಗಳನ್ನು ಪಡೆಯಲು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಜಂಟಿ ನಿರ್ದೇಶಕ ಡಾ. ಹೆಚ್.ಎಲ್ ಚಂದ್ರಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

chikkaballapur
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ:ಕೋವಿಡ್ 2ನೇ ಅಲೆ ಹಿನ್ನೆಲೆ ರಾಜ್ಯ ಸರ್ಕಾರ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯವಿರುವ ಕೆಲಸಗಳಿಗೆ ಮಾರ್ಗಸೂಚಿ ಹೊರಡಿಸಿರುವುದರಿಂದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೃಷಿ ಇಲಾಖೆ (ರೈತ ಸಂಪರ್ಕ ಕೇಂದ್ರ)ದ ಸಮಯವನ್ನು ಬದಲಾವಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಪ್ರಭಾರ ಜಂಟಿ ನಿರ್ದೇಶಕ ಡಾ. ಹೆಚ್.ಎಲ್. ಚಂದ್ರಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮುಂದಿನ ಸರ್ಕಾರದ ಆದೇಶದವರೆಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈ ಅವಧಿಯಲ್ಲಿ ರೈತರು ಬಿತ್ತನೆ, ಬೀಜ ಕೃಷಿ ಪರಿಕರ ಸೇರಿದಂತೆ ಇಲಾಖೆ ಸೌಲಭ್ಯಗಳನ್ನು ಪಡೆಯಲು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಚಿಕ್ಕಬಳ್ಳಾಪುರ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಎ.ಕೇಶವರೆಡ್ಡಿ 9731207959,ಗೌರಿಬಿದನೂರು ಕೃಷಿ ಸಹಾಯಕ ನಿರ್ದೇಶಕ ಎಸ್.ಎಂ.ಮೋಹನ್ 8277930811, ಗುಡಿಬಂಡೆ ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಅನೀಸ್ ಸಲ್ಮಾ8277930849, ಬಾಗೇಪಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಕೆ.ಸಿ. ಮಂಜುನಾಥ್ 8277930828, ಚಿಂತಾಮಣಿ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸ್ 8277930832 ಹಾಗೂ ಶಿಡ್ಲಘಟ್ಟ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್.ವಿ ಮಂಜುನಾಥ್ 82779308857 ಈ ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

ABOUT THE AUTHOR

...view details