ಚಿಕ್ಕಬಳ್ಳಾಪುರ: ಇಂದು ಬಿಡುಗಡೆಯಾದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಐದನೇ ಸ್ಥಾನ ಪಡೆದುಕೊಂಡಿದ್ದು, ಗೌರಿಬಿದನೂರು ನಗರದ ವಿದ್ಯಾರ್ಥಿನಿ 625 ಕ್ಕೆ 625 ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ತಾಲೂಕಿನ ಮುದುಗೆರೆ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರ ದಂಪತಿಗಳ ಮಗಳಾದ ಅಮೂಲ್ಯ ಆರ್. ಕೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಗೌರಿಬಿದನೂರು ನಗರದ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದಳು.