ಚಿಕ್ಕಬಳ್ಳಾಪುರ:ಬಾಗೇಪಲ್ಲಿ ತಾಲೂಕಿನ ಚಿನ್ನೇಪಲ್ಲಿ ಕ್ರಾಸ್ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ದುರಂತ ಸಾವಿಗೀಡಾದ ಘಟನೆ ಗುರುವಾರ ಘಟನೆ ನಡೆದಿದೆ.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು - ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು
ಇಬ್ಬರು ಯುವಕರು ಈಜಲು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಆದರೆ ಕೃಷಿ ಹೊಂಡದಲ್ಲಿ ಮಣ್ಣಿನಲ್ಲಿ ಸಿಲುಕಿ ಇಬ್ಬರೂ ಯುವಕರು ಮೃತಪಟ್ಟಿದ್ದಾರೆ.
ಮಹಮ್ಮದ್ ಸುಹೇಲ್ (17), ಅಫ್ರೀದ್ ಭಾಷಾ (17) ಮೃತ ವಿದ್ಯಾರ್ಥಿಗಳು. ಚಿನ್ನೇಪಲ್ಲಿ ರೈತ ಕೃಷಿ ಚಟುವಟಿಕೆಗಾಗಿ ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಿದ್ದರು. ಸದರಿ ಕೃಷಿ ಹೊಂಡದ ಬಳಿಗೆ ಗುರುವಾರ ಮಧ್ಯಾಹ್ನ ಈಜಲು ಬಂದ ಬಾಗೇಪಲ್ಲಿ ಪಟ್ಟಣದ ಬ್ಲೂಮ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಯುವಕರು ಈಜಲು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಆದರೆ ಕೃಷಿ ಹೊಂಡದಲ್ಲಿ ಮಣ್ಣಿನಲ್ಲಿ ಸಿಲುಕಿ ಇಬ್ಬರೂ ಯುವಕರು ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಧಾವಿಸಿದ ಬಾಗೇಪಲ್ಲಿ ಪಟ್ಟಣದ ತಾಲೂಕು ದಂಡಾಧಿಕಾರಿಗಳಾದ ದಿವಾಕರ್, ಪೊಲೀಸ್ ಠಾಣೆಯ ಆರಕ್ಷಕ ವೃತ್ತಿ ನಿರೀಕ್ಷಿಕ ರಾಜು,ಅಗ್ನಿಶಾಮಕ ದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.