ಚಿಕ್ಕಬಳ್ಳಾಪುರ: ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ನಡೆದಿದೆ.
ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು - ರಸ್ತೆ ಅಪಘಾತ
ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ರಸ್ತೆ ಅಪಘಾತ
ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಮೃತಪಟ್ಟವರು ಎಂದು ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.