ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಪಟ್ಟಣದಲ್ಲಿ ಶಾದಿಮಹಲ್ ಬಳಿ ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ... ಸ್ಥಳದಲ್ಲೇ ಸಾವು - chikkaballapura women died news
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಶಾದಿಮಹಲ್ ಬಳಿ ಮಹಿಳೆಯೊಬ್ಬರಿಗೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬೈಕ್ ಸವಾರ ಸ್ಥಳದಿಂದ ಪರಾರಿ ಆಗಿದ್ದಾನೆ.
ಮಹಿಳೆ ಸಾವು
ಮೃತಪಟ್ಟ ಮಹಿಳೆಯನ್ನು ಲಕ್ಷ್ಮಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ಒಂದು ಬದಿಯಿಂದ ಮತ್ತೊಂದು ಬದಿಗೆ ರಸ್ತೆ ದಾಟುವಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸವಾರನು ತನ್ನ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.