ಚಿಕ್ಕಬಳ್ಳಾಪುರ:ಮತಾಂತರ ನಿಷೇಧ ವಿಧೇಯಕ ಮಂಡನೆ ಬೆನ್ನಲ್ಲೇ ತಾಲೂಕಿನ ಸೂಸೆಪಾಳ್ಯ ಗ್ರಾಮದಲ್ಲಿ ಕಿಡಿಗೇಡಿಗಳು ಸಂತ ಆಂಟೋನಿ ವಿಗ್ರಹಕ್ಕೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಸೂಸೆಪಾಳ್ಯ ಗ್ರಾಮದಲ್ಲಿ ವಿಗ್ರಹಕ್ಕೆ ಕಿಡಿಗೇಡಿಗಳು ಇಂದು ಬೆಳಗ್ಗೆ ಅಪಮಾನ ಎಸಗಿದ್ದಾರೆ ಎನ್ನಲಾಗ್ತಿದೆ. ಈ ವಿಗ್ರಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೂಸೆಪಾಳ್ಯ ಗ್ರಾಮದಲ್ಲಿ ಸುಮಾರು 80 ಕ್ರಿಶ್ಚಿಯನ್ ಕುಟುಂಬಗಳು ವಾಸಿಸುತ್ತಿದ್ದಾರೆ.