ಚಿಕ್ಕಬಳ್ಳಾಪುರ:ಅಪರಿಚಿತ ವಾಹನವೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 7ರ ಆರೂರು ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - ರಾಷ್ಟ್ರೀಯ ಹೆದ್ದಾರಿ 7 ಆರೂರು ಅಪಘಾತ
ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 7ರ ಆರೂರು ಬಳಿ ಬೈಕ್ ಮತ್ತು ವಾಹನವೊಂದರ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಚಿಕ್ಕಬಳ್ಳಾಪುರ ತಾಲೂಕಿನ ಕಮ್ಮಗುಟ್ಟಹಳ್ಳಿ ನಿವಾಸಿ ನವೀನ್ (30) ಸಾವನ್ನಪ್ಪಿದವ. ಇಂದು ಗಾಂಧಿ ಜಯಂತಿ ಪ್ರಯುಕ್ತ ಕೆಲಸಕ್ಕೆ ರಜೆ ಇದ್ದ ಕಾರಣ ಚಿಕ್ಕಬಳ್ಳಾಪುರದಿಂದ ಮನೆಗೆ ಬೇಕಾಗುವ ಸಾಮಗ್ರಿಗಳನ್ನ ಕೊಂಡು ವಾಪಸಾಗುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 7ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಕಿರು ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಹಲವು ಅಪಘಾತಗಳು ಸಂಭವಿಸುತ್ತಿವೆ.ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.