ಕರ್ನಾಟಕ

karnataka

ETV Bharat / state

ವಾಲ್ಮೀಕಿ ಸಮಾಜಕ್ಕೆ 7.5ಮೀಸಲಾತಿ.. ಶಾಸಕ ಸುಬ್ಬಾರೆಡ್ಡಿ ಆಗ್ರಹ - Valmiki community demand for reservation

ಜನಸಂಖ್ಯೆಗೆ ಅನುಗುಣವಾಗಿ ವಾಲ್ಮೀಕಿ ಜನಾಂಗಕ್ಕೆ ಈಗಿರುವ ಮೀಸಲಾತಿ ಬದಲು ಶೇ.7.5ರಷ್ಟು ಮೀಸಲಾತಿ ನೀಡುವಂತೆ ವಿಧಾನಸಭೆಯಲ್ಲಿ ಒತ್ತಡ ಹೇರುತ್ತೇನೆ ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ತಿಳಿಸಿದರು.

valmiki-community-demand-for-reservation

By

Published : Oct 21, 2019, 11:47 PM IST

ಗುಡಿಬಂಡೆ:ಜನಸಂಖ್ಯೆಗೆ ಅನುಗುಣವಾಗಿ ವಾಲ್ಮೀಕಿ ಜನಾಂಗಕ್ಕೆ ಈಗಿರುವ ಮೀಸಲಾತಿ ಬದಲು ಶೇ.7.5ರಷ್ಟು ಮೀಸಲಾತಿ ನೀಡುವಂತೆ ವಿಧಾನಸಭೆಯಲ್ಲಿ ಒತ್ತಡ ಹೇರುತ್ತೇನೆ ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ತಿಳಿಸಿದರು.

ನಗರದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಾಲ್ಮೀಕಿ ಜನಾಂಗಕ್ಕೆ ಇಂದು ಕೇವಲ ಶೇ.3.5ರಷ್ಟು ಮೀಸಲಾತಿ ಇದೆ. ಇದರಿಂದ ವಾಲ್ಮೀಕಿ ಜನಾಂಗಕ್ಕೆ ತುಂಬಾ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇನೆ. ಈ ಬಗ್ಗೆ ಸರ್ಕಾರವೂ ಗಮನ ಹರಿಸಬೇಕು ಎಂದರು.

ಶಾಸಕ ಎಸ್ ಎನ್ ಸುಬ್ಬಾರೆಡ್ಡಿ..

ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಅವರ ಜೀವನದಲ್ಲಾದ ಮಹತ್ತರ ತಿರುವುಗಳನ್ನು ನಾವೆಲ್ಲರೂ ಅರಿತು ನಮ್ಮ ಬದುಕಿನಲ್ಲೂ ವಿಶೇಷ ಸಾಧನೆ ಮಾಡಬೇಕು. ಹೀಗೆ ಸಮಾಜ ಸುಧಾರಣೆಗಾಗಿ ಮಹನೀಯರು ತಮ್ಮ ಜೀವನವನ್ನೇ ತ್ಯಾಗಮಾಡಿದ್ದಾರೆ. ಅಂತಹ ಮಹನೀಯರ ಆದರ್ಶಗಳನ್ನು ಪಾಲಿಸಿದಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದರು.

ABOUT THE AUTHOR

...view details