ಗುಡಿಬಂಡೆ:ಗ್ರಾಮೀಣ ಭಾಗದ ಜನತೆಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕೊರತೆಯಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಅವರಿಗೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಸಲಹೆ ನೀಡಿದರು.
ಗ್ರಾಮೀಣ ಭಾಗದ ಜನರಿಗೆ ಪೌಷ್ಟಿಕ ಆಹಾರದ ಜಾಗೃತಿ ಅಗತ್ಯ.. ಆರೋಗ್ಯಾಧಿಕಾರಿ ಪ್ರತಿಪಾದನೆ - we have to give protein food for pregnant ladies
ಚಿಕ್ಕಬಳ್ಳಾಪುರದ ಗುಡಿಬಂಡೆಯಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಲಾಗಿದ್ದ ಪೋಷನ್ ಅಭಿಯಾನ ಕಾರ್ಯಕ್ರಮವನ್ನು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಗ್ರಾಮೀಣ ಭಾಗಗಳಲ್ಲಿ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಬೆಳೆಯುತ್ತಿದ್ದರು. ಸಿರಿಧಾನ್ಯಗಳನ್ನು ಗರ್ಭಿಣಿಯರಿಗೆ ಹೆಚ್ಚಾಗಿ ನೀಡುತ್ತಿದ್ದರು. ಸ್ಥಳೀಯವಾಗಿ ದೊರೆಯುವ ಹಣ್ಣು ಹಂಪಲುಗಳನ್ನು ನೀಡುತ್ತಿದ್ದರು. ಆದರೆ, ಇತ್ತೀಚೆಗೆ ಆ ಪದ್ದತಿ ಕಣ್ಮರೆಯಾಗುತ್ತಿದೆ ಎಂದರು.
ಮಸಾಲೆಯುಕ್ತ, ರಾಸಾಯನಿಕ ವಸ್ತುಗಳಿಂದ ಕೂಡಿದ ಆಹಾರ ಮಾರುಕಟ್ಟೆಗೆ ಧಾವಿಸಿರುವುದರಿಂದ ಅದನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಗರ್ಭಿಣಿಯರು ಪೌಷ್ಟಿಕಾಂಶದ ಕೊರತೆ ಎದುರಿಸುತ್ತಿದ್ದಾರೆ. ಆದ್ದರಿಂದ ಸ್ಥಳೀಯವಾಗಿ ದೊರೆಯುವಂತಹ ಪೌಷ್ಟಿಕಾಂಶಗಳುಳ್ಳ ಆಹಾರವನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಬೇಕೆಂದರು.