ಚಿಕ್ಕಬಳ್ಳಾಪುರ:ಕೊರೊನಾ 2ನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ವೀಕೆಂಡ್ ಕರ್ಫ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ನಿಯಮ ಮೀರಿ ಅನಗತ್ಯವಾಗಿ ಓಡಾಡುತ್ತಿದ್ದ 49 ದ್ವಿಚಕ್ರವಾಹನಗಳು, 3 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ರೌಂಡ್ಸ್ ಮಾಡಿದ ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಅನಾವಶ್ಯಕವಾಗಿ ಬೀದಿಗಿಳಿದ ಸಾರ್ವಜನಿಕರಿಗೆ ಲಾಠಿ ರುಚಿ ತೋರಿಸಿದರು.