ಕರ್ನಾಟಕ

karnataka

ETV Bharat / state

ಕೋಲಾರದಲ್ಲಿ ಸಿದ್ದರಾಮಯ್ಯಗೆ ಗೆಲುವು ಕಠಿಣ: ಸಚಿವ ಡಾ.ಕೆ.ಸುಧಾಕರ್ - ಸಿದ್ದರಾಮಯ್ಯ ಕೋಲಾರದಲ್ಲಿ ಗೆಲ್ಲುವುದು ಕಠಿಣ

ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದರು.

sudhakar
ಆರೋಗ್ಯ ಸಚಿವ ಸುಧಾಕರ್

By

Published : Nov 16, 2022, 9:01 AM IST

ಚಿಕ್ಕಬಳ್ಳಾಪುರ: ನನ್ನ ರಾಜಕೀಯ ಅನುಭವದ ಪ್ರಕಾರ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ‌ ಮಾಜಿ‌ ‌ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲ್ಲುವುದು ಕಠಿಣ. ಅವರಿಗೆ ಒಳ್ಳೆಯದಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭವಿಷ್ಯ ನುಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್

ನಗರದ ವಿಶ್ವೇಶ್ವರಯ್ಯ ಕಲಾಭವನದ ಕಾಮಗಾರಿ ಪರಿಶೀಲನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲಿ ಬೇಕಾದ್ರೂ ಚುನಾವಣೆಗೆ ನಿಲ್ಲಬಹುದು. ಇದಕ್ಕೆ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಇತ್ತೀಚೆಗೆ ಅವರು ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿದ್ದು, ಗೆಲುವು ಕಠಿಣ ಎಂದರು.

ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೈಕಮಾಂಡ್ ತೀರ್ಮಾನ ಮಾಡಬೇಕು. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳೆಂದು ಸ್ವಯಂ‌ ಘೋಷಿತವಾಗಿ ನಿರ್ಧಾರ ಮಾಡಿಕೊಂಡರೆ ಆಗುವುದಿಲ್ಲ. ಹೀಗೆ ಮೊದಲೇ ಸಿಎಂ ಅಭ್ಯರ್ಥಿ ಎಂದು ಘೋಷಿಸಿಕೊಳ್ಳುವುದು ತಪ್ಪು ಎಂದು ಹೇಳಿದರು.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಸಿದ್ದರಾಮಯ್ಯ ಒಲವು.. ಹೇಗಿದೆ ಲೆಕ್ಕಾಚಾರ?

ಬಿಜೆಪಿ‌ ಬಿಟ್ಟು ಕಾಂಗ್ರೆಸ್ ಸೇರಿಕೊಂಡ 5 ಮಂದಿ ನಗರಸಭೆ ಸದಸ್ಯರ ಕುರಿತು ಮಾತನಾಡುತ್ತಾ, ರಾಜಕಾರಣ ಅಂದ್ರೆ ಲಾಭ, ನಷ್ಟ ಇದ್ದಂತೆ. ಚುನಾವಣೆ ಸಂದರ್ಭದಲ್ಲಿ ಪಕ್ಷ ಬಿಟ್ಟು ಹೋಗುವುದು ಸಹಜ. ಆದರೆ, ಅವರು ಯಾವ ಕಾರಣಕ್ಕೆ ಪಕ್ಷ ಬಿಟ್ಟು ಹೋಗಿದ್ದಾರೆ ಎಂಬುದು ಗೊತ್ತಿಲ್ಲ. ಕೆಲವರು ಸಂತೆಯಲ್ಲಿ ವಹಿವಾಟು ಆದಂತೆ ನಡೆದುಕೊಳ್ಳುತ್ತಾರೆ, ಅವರ ಬಗ್ಗೆ ಅವರೇ ಅವಲೋಕನ ಮಾಡಿಕೊಳ್ಳಬೇಕು ಎಂದರು.

ABOUT THE AUTHOR

...view details