ಚಿಕ್ಕಬಳ್ಳಾಪುರ:ಚಿಂತಾಮಣಿ ತಾಲೂಕಿನ ಇರಗಂಪಲ್ಲಿ ಗ್ರಾಮದಲ್ಲಿ ಮನೆಯ ಹಿಂಭಾಗ ಗಾಂಜಾ ಗಿಡ ಬೆಳೆದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಮ್ಮ ಬಂಧಿತ ಮಹಿಳೆ.
ಮಹಿಳೆ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಮಾಹಿತಿ ಪಡೆದ ಬಟ್ಲಹಳ್ಳಿ ಠಾಣೆಯ ಸಬ್ ಇನ್ಸ್ಪೆಕ್ಟರ್ ನಾರಾಯಣ್ ಸ್ವಾಮಿ ಮತ್ತು ತಂಡ ದಾಳಿ ನಡೆಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು, ಆರೋಪಿ ವಿಜಯಮ್ಮಳನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.