ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ ಗೃಹಿಣಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೋಟಗಲ್ ಗ್ರಾಮದಲ್ಲಿ ಜರುಗಿದೆ.
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಗೃಹಿಣಿ - Chikkaballapur crime news
ಗಂಡ ಹಾಗೂ ಪತ್ನಿಯ ನಡುವೆ ಕೌಟುಂಬಿಕ ಕಲಹಗಳು ನಡೆಯುತ್ತಿದ್ದು, ಇದರಿಂದ ಬೇಸತ್ತ ಪತ್ನಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
![ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಗೃಹಿಣಿ](https://etvbharatimages.akamaized.net/etvbharat/prod-images/768-512-4928275-thumbnail-3x2-nin.jpg)
ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ಮೂರ್ತಿ ಎಂಬುವವರ ಪತ್ನಿ ಸರಸ್ವತಮ್ಮ (27) ಹಾಗೂ ಮಕ್ಕಳಾದ ನವ್ಯ(5) , ನಿತ್ಯಶ್ರೀ (3) ಮೃತರು ಎಂದು ತಿಳಿದು ಬಂದಿದೆ. ಗಂಡ ಹಾಗೂ ಪತ್ನಿಯ ನಡುವೆ ಕೌಟುಂಬಿಕ ಕಲಹಗಳು ನಡೆಯುತ್ತಿದ್ದು, ಇದರಿಂದ ಬೇಸತ್ತ ಪತ್ನಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ಸದ್ಯ ಅಗ್ನಿಶಾಮಕದಳ ಸ್ಥಳಕ್ಕೆ ಭೇಟಿ ನೀಡಿ ಇಬ್ಬರ ಮೃತ ದೇಹಗಳನ್ನು ಹೊರತಗೆದಿದ್ದು, ಮತ್ತೊಂದು ದೇಹಕ್ಕಾಗಿ ಹುಡುಕಾಟ ಮುಂದುವರೆಸಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.