ಚಿಕ್ಕಬಳ್ಳಾಪುರ: ಉತ್ತರ ಪಿನಾಕಿನಿ ನದಿ(Pinakini river)ಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ತೇಲಿ ಬಂದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ದೊಡ್ಡಕುರುಗೋಡು ಗ್ರಾಮದ ಬಳಿ ನಡೆದಿದೆ.
ಪಿನಾಕಿನಿ ನದಿಯಲ್ಲಿ ತೇಲಿ ಬಂತು ಅಪರಿಚಿತ ಮಹಿಳೆ ಶವ.. ಕೇಸ್ ದಾಖಲು - woman dead body found in river
ಅಪರಿಚಿತ ಮಹಿಳೆಯ ಶವವೊಂದು ಉತ್ತರ ಪಿನಾಕಿನಿ ನದಿ(Pinakini river)ಯಲ್ಲಿ ತೇಲಿ ಬಂದ ಘಟನೆ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ. ಮಹಿಳೆಗೆ 50 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಗೌರಿಬಿದನೂರು ಪೊಲೀಸ್ ಠಾಣೆ
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕುರುಗೋಡು ಗ್ರಾಮದಲ್ಲಿ ಇಂದು ಬೆಳಗ್ಗೆ ಗ್ರಾಮಸ್ಥರು ನೀರಿನಲ್ಲಿ ತೇಲಿ ಬಂದ ಶವ ಕಂಡು ದಂಗಾಗಿದ್ದರು. ನಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಗೌರಿಬಿದನೂರು ವೃತ್ತ ನಿರೀಕ್ಷಕ ಶಶಿಧರ್ ಹಾಗೂ ಗ್ರಾಮಾಂತರ ಠಾಣೆಯ ಪಿಎಸ್ಐ ವಿಜಯಕುಮಾರ್ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.