ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೋರ್ವಳ ಶವ ಪತ್ತೆಯಾಗಿದ್ದು, ಆಕೆಯ ಗಂಡ ಹಾಗೂ ಅತ್ತೆಯ ಮೇಲೆ ಕೊಲೆ ಶಂಕೆ ವ್ಯಕ್ತವಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ಗಂಡ, ಅತ್ತೆ ವಿರುದ್ಧ ಕೊಲೆ ಆರೋಪ - woman dead body found hanging
ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಗಂಡ ಹಾಗೂ ಅತ್ತೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
![ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ಗಂಡ, ಅತ್ತೆ ವಿರುದ್ಧ ಕೊಲೆ ಆರೋಪ](https://etvbharatimages.akamaized.net/etvbharat/prod-images/768-512-4445564-thumbnail-3x2-megha.jpg)
ನಾಗಮಂಗಲ ಗ್ರಾಮದ ನಿವಾಸಿ ಯಶೋಧ (25) ಎಂಬ ಮಹಿಳೆಯನ್ನು ಆಕೆಯ ಗಂಡ ನಾಗೇಶ್ ಹಾಗೂ ಅತ್ತೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಶೋಧಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಇನ್ನು ಶಾಲಾ ವಾಹನದ ಚಾಲಕನಾಗಿ ಗಂಡ ನಾಗೇಶ್ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿ ಸಣ್ಣಪುಟ್ಟ ಕಾರಣಗಳಿಂದ ಜಗಳ ಶುರುವಾಗಿದೆ. ಅದೇ ಜಗಳ ವಿಕೋಪಕ್ಕೆ ತಿರುಗಿದ ನಂತರ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ನಾಗೇಶ್ ಪೊಲೀಸರಿಗೆ ಸೆರೆ ಸಿಕ್ಕಿದ್ದು, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.