ಚಿಕ್ಕಬಳ್ಳಾಪುರ:ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣಾ ಎಂಬುವರು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನಗರದ ತಿಮ್ಮಕ್ಕ ಲೇಔಟ್‌ನಲ್ಲಿ ನಡೆದಿದೆ.
ಅರುಣಾ ಚಿಕ್ಕಬಳ್ಳಾಪುರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿರುವ ಶಿವಮೂರ್ತಿಯ ಮೇಲೆ ಅನುಮಾನ ವ್ಯಕ್ತವಾಗಿದೆ.
ಅರುಣಾಗೆ ಕಳೆದ 12 ವರ್ಷಗಳ ಹಿಂದೆ ಸತ್ಯಾನಂದ ಎನ್ನುವ ವ್ಯಕ್ತಿಯ ಜೊತೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ ಮನೆಯಲ್ಲಿ ಕೌಟುಂಬಿಕ ಕಲಹವಿದ್ದ ಹಿನ್ನೆಲೆಯಲ್ಲಿ ಆಕೆಯ ಪತಿ, ಮಕ್ಕಳು ಹೆಂಡತಿಯನ್ನು ತೊರೆದು ಬೇರೆಡೆ ವಾಸವಾಗಿದ್ದರು.