ಬಾಗೇಪಲ್ಲಿ (ಚಿಕ್ಕಬಳ್ಳಾಪುರ):ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ 8ನೇ ವಾರ್ಡ್ನಲ್ಲಿ ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಾಗೇಪಲ್ಲಿ: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ - Suicide case of bagepalli
ಮನೆಯಲ್ಲಿ ಹಣಕಾಸಿನ ವಿಚಾರದಲ್ಲಿ ಗೃಹಿಣಿ ಮನನೊಂದು ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಸದ್ಯ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Suicide case of bagepalli
ಬಾಗೇಪಲ್ಲಿ ಪಟ್ಟಣದ 8ನೇ ವಾರ್ಡ್ನಲ್ಲಿ ರಾಘವೇಂದ್ರ ಎಂಬುವವರ ಮನೆಯಲ್ಲಿ ಗೃಹಿಣಿ ಮಂಜುಳಾ (46) ಸುಮಾರು 8 ತಿಂಗಳಿನಿಂದ ಬಾಡಿಗೆಗೆ ವಾಸವಾಗಿದ್ದರು. ಮನೆಯಲ್ಲಿ ಹಣಕಾಸಿನ ವಿಚಾರದಲ್ಲಿ ಮನನೊಂದು ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಸದ್ಯ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದಾರೆ.