ಚಿಕ್ಕಬಳ್ಳಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದಿದೆ.
ವಾಣಿಜ್ಯ ಪದವೀಧರ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು - Student suicide news
ಸ್ಥಳೀಯರ ಸಹಾಯದಿಂದ ಯುವಕನ ಪ್ರಾಣ ರಕ್ಷಿಸುವ ಸಲುವಾಗಿ ಚಿಕ್ಕಬಳ್ಳಾಪುರದ ಅನನ್ಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಗಿತ್ತು. ಆದ್ರೆ, ಮಾರ್ಗಮಧ್ಯದಲ್ಲಿಯೇ ಆತ ಮೃತಪಟ್ಟಿದ್ದಾನೆ.
Died
ಮಾರುತಿ ನಗರದ ನಿವಾಸಿ ವೆಂಕಟೇಶ್ (22) ಮೃತ ಯುವಕ ಎಂದು ತಿಳಿದು ಬಂದಿದೆ. ಬಿ.ಕಾಂ ವ್ಯಾಸಂಗ ಮುಗಿಸಿದ್ದ ಈತ ತನ್ನ ಮನೆಯಲ್ಲಿಯೇ ವಿಷ ಸೇವಿಸಿ ಸಾವಿನ ಕದ ತಟ್ಟಿದ್ದಾನೆ. ಸ್ಥಳೀಯರ ಸಹಾಯದಿಂದ ಯುವಕನ ಪ್ರಾಣ ರಕ್ಷಿಸುವ ಸಲುವಾಗಿ ಚಿಕ್ಕಬಳ್ಳಾಪುರ ಅನನ್ಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಗಿತ್ತು. ಆದ್ರೆ, ಮಾರ್ಗಮಧ್ಯದಲ್ಲಿಯೇ ಆತ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಮೃತದೇಹವನ್ನು ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.