ಬಾಗೇಪಲ್ಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪರಗೋಡು ಗ್ರಾಮದ ಬಳಿಯ ಚಿತ್ರಾವತಿ ಡ್ಯಾಂ ಬಳಿ ಯುವಕನ ಶವ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 3ರಂದು ಚಿತ್ರಾವತಿ ಡ್ಯಾಂ ಬಳಿ ರಾಜ್ ಎಂಬ ಯುವಕನ ಶವ ಪತ್ತೆಯಾಗಿತ್ತು. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ 66/2020 ಕಲಂ, ಐಪಿಸಿ ಸೆಕ್ಷನ್ 302 ಮತ್ತು 201ರ ಅಡಿ ಕೇಸು ದಾಖಲಿಸಲಾಗಿತ್ತು. ಬಳಿಕ ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ. ರವಿಶಂಕರ್, ಸಿಪಿಐ ನಯಾಜ್ ಬೇಗ್ ಮತ್ತು ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಯುವಕನ ಕೊಲೆ ಪ್ರಕರಣದ ತನಿಖೆ ತೀವ್ರಗೊಳಿಸಿದರು. ಬಳಿಕ ವೈಜ್ಞಾನಿಕ ಸಾಕ್ಷಾಧಾರಗಳು ಮತ್ತು ಸುಳಿವಿನ ಮೇರೆಗೆ ಪ್ರಕರಣ ಭೇದಿಸಿ 4 ಜನ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಈ ಕೃತ್ಯಕ್ಕೆ ಉಪಯೋಗಿಸಿದ ಕಾರು ಮತ್ತು ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.