ಕರ್ನಾಟಕ

karnataka

ETV Bharat / state

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ - ಈಟಿವಿ ಭಾರತ ಕನ್ನಡ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆಯಲ್ಲಿ ಓರ್ವನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

youth-murdered-by-friend-in-chikkaballapura
ಕ್ಷುಲ್ಲಕ ಕಾರಣಕ್ಕೆ ಗಲಾಟೆ : ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ

By

Published : Dec 1, 2022, 8:29 PM IST

ಚಿಕ್ಕಬಳ್ಳಾಪುರ : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆಯಲ್ಲಿ ಒಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚೇಳೂರಿನ ಕಬೀರ್ ಕಾಲೋನಿಯ ಮಂಡಿಯಲ್ಲಿ ನಡೆದಿದೆ.

ಚೇಳೂರು ಗ್ರಾಮದ ನಾಸಿರ್ (26) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. 20 ವರ್ಷದ ಸೋನು ಕೊಲೆ ಆರೋಪಿ ಎನ್ನಲಾಗಿದ್ದು, ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದ ಚೇಳೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ :9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬ್ಲೇಡ್‌ನಿಂದ ಕತ್ತು ಸೀಳಿ ಕೊಲೆ.. 15 ವರ್ಷದ ಬಾಲಕನ ಸೆರೆ

ABOUT THE AUTHOR

...view details