ಚಿಕ್ಕಮಗಳೂರು :ಜಿಲ್ಲೆಯಲ್ಲಿನ ಪ್ರತಿ ಗೊಲ್ಲರಹಟ್ಟಿ ಗ್ರಾಮಗಳ ಮೂಲಸೌಕರ್ಯಕ್ಕಾಗಿ 10 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದ್ದಾರೆ.
ಕಡೂರು ತಾಲೂಕಿನ ಜೋಡಿ ಲಿಂಗದಹಳ್ಳಿ ಗ್ರಾಮದಲ್ಲಿ ಜೋಡಿ ಲಿಂಗದಹಳ್ಳಿಯಿಂದ-ತಾಂಡಾದವರೆಗೂ ₹20 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಜಿಲ್ಲೆಯ ಗೊಲ್ಲರಹಟ್ಟಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ₹10ಲಕ್ಷ ವಿಶೇಷ ಅನುದಾನ ಬಿಡುಗಡೆಗೊಳಿಸುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜೋಡಿ ಲಿಂಗದಹಳ್ಳಿಯಿಂದ-ಜೋಡಿಲಿಂಗದಹಳ್ಳಿ ತಾಂಡಾದವರೆಗೆ ಒಟ್ಟು 50 ಲಕ್ಷದ ರಸ್ತೆ ಕಾಮಗಾರಿಯಲ್ಲಿ ಈಗಾಗಲೇ ರೂ. 30 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಂಡಿದೆ. ₹20 ಲಕ್ಷದ ಮುಂದಿನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ.