ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ 102 ಕೊರೊನಾ ಕೇಸ್‌ ಪತ್ತೆ

ನಿನ್ನೆ ಹೊಸದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 102 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 111 ಜನರು ಗುಣಮುಖರಾಗಿ ಬಿಡುಗಡೆಯಾದರು.

Chikkamagaluru
Chikkamagaluru

By

Published : Oct 24, 2020, 9:45 AM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 102 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,941 ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 111 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 10,918 ಜನ ಚಿಕಿತ್ಸೆ ಪಡೆದು ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 33, ಕಡೂರು 21, ಮೂಡಿಗೆರೆ 06, ತರೀಕೆರೆ 23, ಶೃಂಗೇರಿ 11, ಕೊಪ್ಪ 05, ಎನ್ಆರ್‌ಪುರ ತಾಲೂಕಿನಲ್ಲಿ 03 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 776 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 136 ಜನ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ABOUT THE AUTHOR

...view details