ಚಿಕ್ಕಮಗಳೂರು:ಜಿಲ್ಲೆಯಲ್ಲಿ ಈ ದಿನ 112 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,816 ಕ್ಕೆ ಏರಿಕೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಒಟ್ಟು 4,677 ಜನ ಸೋಂಕಿತರು ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 2,036 ಸಕ್ರಿಯ ಪ್ರಕರಣಗಳಿವೆ.