ಚಿಕ್ಕಮಗಳೂರು: ಅಡಿಕೆ ತೋಟದಲ್ಲಿ ಬೆಚ್ಚಗೆ ಮಲಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಚಿಕ್ಕಮಗಳೂರಿನಲ್ಲಿ ಸೆರೆ ಹಿಡಿಯಲಾಗಿದೆ.
ಚಿಕ್ಕಮಗಳೂರಿನಲ್ಲಿ 12 ಅಡಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ
ಮೂಡಿಗೆರೆ ತಾಲೂಕಿನ ಕಳಸ ಸಮೀಪ ಕಾರಗದ್ದೆಯ ಗ್ರಾಮಪಂಚಾಯಿತಿ ಸದಸ್ಯ ಪಾಪಣ್ಣ ಅವರ ಅಡಿಕೆ ತೋಟದಲ್ಲಿ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪ ಕಾರಗದ್ದೆಯ ಗ್ರಾಮಪಂಚಾಯಿತಿ ಸದಸ್ಯ ಪಾಪಣ್ಣ ಅವರ ಅಡಿಕೆ ತೋಟದಲ್ಲಿ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ತೋಟದ ಕಾರ್ಮಿಕರು ಮಾಲೀಕರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ತೋಟದ ಮಾಲೀಕ ಪಾಪಣ್ಣ, ಕಳಸದ ಉರಗ ತಜ್ಞ ರಿಜ್ವಾನ್ ಅವರಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಿಜ್ವಾನ್ ಸತತ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ಮಾಡಿ ಈ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿದ್ದಾರೆ.
ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸೆರೆ ಹಿಡಿದ ಬೃಹತ್ ಕಾಳಿಂಗ ಸರ್ಪವನ್ನು ಕುದುರೆಮುಖ ಅಭಯಾರಣ್ಯಕ್ಕೆ ಬಿಡಲಾಯಿತು.