ಕರ್ನಾಟಕ

karnataka

ETV Bharat / state

ಬಿರುಸಿನ ಮಳೆ: ಕುರಿ ಕಾಯುತ್ತಿದ್ದ ವ್ಯಕ್ತಿ ಸಿಡಿಲಿಗೆ ಬಲಿ

ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕುರಿ ಮೇಯಿಸಲು ಹೋಗಿದ್ದ ವೇಳೆ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

By

Published : Apr 9, 2019, 7:58 PM IST

ರೇವಣ್ಣ (40) ಮೃತ ವ್ಯಕ್ತಿ

ಚಿಕ್ಕಮಗಳೂರು:ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸಿಡಿಲಿನ ಅಬ್ಬರಕ್ಕೆ ಕಡೂರು ತಾಲೂಕಿನಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.ಕೋಡಿಹಳ್ಳಿಯ ರೇವಣ್ಣ (40) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ರೇವಣ್ಣ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ.ಸುದ್ದಿ ತಿಳಿದು ಸ್ಥಳಕ್ಕೆ ಯಗಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಬಗ್ಗೆ ದೂರು ದಾಖಲು ಮಾಡಿಕೊಂಡಿದ್ದಾರೆ.

ABOUT THE AUTHOR

...view details