ಚಿಕ್ಕಮಗಳೂರು : ಜಿಲ್ಲೆಯಲ್ಲಿ ಶುಕ್ರವಾರ 129 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ, 10,155ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು : 129 ಜನರಲ್ಲಿ ಕೊರೊನಾ ಸೋಂಕು - 129 new corona positive case found in chikkamagaluru
ಚಿಕ್ಕಮಗಳೂರು ಜಿಲ್ಲೆಯಲ್ಲಿ 129 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು
ಆಸ್ಪತ್ರೆಯಿಂದ 167 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 8,485 ಮಂದಿ ಚೇತರಿಸಿಕೊಂಡಂತಾಗಿದೆ. ಚಿಕ್ಕಮಗಳೂರು 20, ಕಡೂರು 45, ಮೂಡಿಗೆರೆ 17, ತರೀಕೆರೆ 29, ಶೃಂಗೇರಿ 17 ಹಾಗೂ ಕೊಪ್ಪ ತಾಲೂಕಿನಲ್ಲಿ 01 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಒಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 128ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1,375 ಸಕ್ರಿಯ ಪ್ರಕರಣಗಳಿವೆ.