ಚಿಕ್ಕಮಗಳೂರು: ಜಿಲ್ಲೆಯ ಕೊಟ್ಟಿಗೆಹಾರ ಬಳಿಯ ಅತ್ತಿಗೆರೆ ಗ್ರಾಮದಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಗಿದೆ.
ಚಿಕ್ಕಮಗಳೂರಿನಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಒಂದು ಗಂಟೆಗೂ ಅಧಿಕ ಕಾಲ ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ ಹಿಡಿಯುವಲ್ಲಿ ಉರುಗ ತಜ್ಞ ಆರಿಫ್ ಯಶಸ್ವಿಯಾದರು. ಬಳಿಕ ಕಾಳಿಂಗನನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಚಾರ್ಮಾಡಿ ಅರಣ್ಯಕ್ಕೆ ಬಿಡಲಾಗಿದೆ.
ಗ್ರಾಮದ ಮಂಜುನಾಥ ಗೌಡ ಎಂಬುವರ ಕಾಫಿ ತೋಟದಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪ ಅಡ್ಡಾಡುತ್ತಿರುವುದು ನೋಡಿದ ತೋಟದ ಕಾರ್ಮಿಕರು ಕೂಡಲೇ ಮಾಲೀಕರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಂಜುನಾಥ ಮೂಡಿಗೆರೆ ತಾಲೂಕಿನ ಉರುಗ ತಜ್ಞ ಆರಿಫ್ಗೆ ಫೋನ್ ಮಾಡಿ ಕರೆಸಿದ್ದಾರೆ.
ಒಂದು ಗಂಟೆಗೂ ಅಧಿಕ ಕಾಲ ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ ಹಿಡಿಯುವಲ್ಲಿ ಉರುಗ ತಜ್ಞ ಆರಿಫ್ ಯಶಸ್ವಿಯಾದರು. ಬಳಿಕ ಕಾಳಿಂಗನನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಚಾರ್ಮಾಡಿ ಅರಣ್ಯಕ್ಕೆ ಬಿಡಲಾಗಿದೆ. ಸ್ನೇಕ್ ಆರಿಫ್ ಈವರೆಗೂ ನೂರಾರು ಕಾಳಿಂಗ ಸರ್ಪಗಳನ್ನು ಸೆರೆ ಹಿಡಿದು ರಕ್ಷಣೆ ಮಾಡಿದ್ದಾರೆ.